ಬಿಗ್ ಬ್ರೇಕಿಂಗ್: 2014ಕ್ಕಿಂತ 2019ರಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು!!!!
ಎರಡು ದಿನಗಳ ಕಾಲ ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿದ್ದು, ಶನಿವಾರ ಆರಂಭವಾಗಿದೆ. ಇನ್ನು ಬಿಜೆಪಿ ಸಭೆಯಲ್ಲಿ ಮಾತನಾಡಿರುವ ಅಮಿತ್ ಶಾ ಅವರು ಭರ್ಜರಿ ಗೆಲುವಿನೊಂದಿಗೆ ಮತ್ತೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಭರವಸೆ ವ್ಯಕ್ತಪಡಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತಲೂ ಅತ್ಯಧಿಕ ಪ್ರಮಾಣದಲ್ಲಿ ಗೆಲುವು ಪಡೆಯುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ಏರಲಿದೆ ಎಂದು ಹೇಳಿದ್ದಾರೆ.
ಅಲ್ಲದೇ ಅಜೇಯ ಬಿಜೆಪಿ ಎಂಬ ಘೊಷಣೆಯೊಂದನ್ನೂ ಕೂಡ ಅವರು ರಾಜ್ಯ ಘಟಕಗಳ ಅಧ್ಯಕ್ಷರುಗಳಿಗೆ ಅನ್ವಯಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಇನ್ನು ಕೆಲವೇ ತಿಂಗಳಲ್ಲಿ ಐದು ರಾಜ್ಯಗಳಾದ ತೆಲಂಗಾಣ, ರಾಜಸ್ಥಾನ, ಮಧ್ಯ ಪ್ರದೇಶ, ಚತ್ತೀಸ್ ಗಢದಲ್ಲಿ ಚುನಾವಣೆ ನಡೆಯುತ್ತಿದ್ದು ಗೆಲುವು ಪಡೆಯಲು ಹೆಚ್ಚಿನ ಒತ್ತು ನೀಡಬೇಕು, ಗೆಲುವಿಗಾಗಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎನ್ನುವ ವಿಚಾವರನ್ನು ಚರ್ಚೆ ಮಾಡಲಾಯಿತು



Comments
Post a Comment