ಪ್ರಧಾನಿ ಮೋದಿಯವರಿಗೆ ಪತ್ರ ಬರೆದ ಹೆಚ್.ಡಿ.ದೇವೆಗೌಡ ಕಾರಣ ಏನು ಗೊತ್ತಾ?

ರೈತರ ಸಾಲಮನ್ನಾ, ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ಹೀಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಟೀದಾರ್ ಸಮುದಾಯದ ಮುಖ್ಯಸ್ಥ ಹಾರ್ದಿಕ್ ಪಟೇಲ್ ನಡೆಸುತ್ತಿರುವ ಅಮರಣಾಂತ ಉಪವಾಸ ಇಂದು 11 ನೇ ದಿನಕ್ಕೆ ಕಾಲಿಟ್ಟಿದ್ದು, ಹಾಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ರ ಬರೆದಿದ್ದಾರೆ.

ಗುಜರಾತ್ ನಲ್ಲಿನ ಬೆಳವಣಿಗೆ ಕಂಡು ನನಗೆ ಬೇಸರವಾಗಿದೆ. ಪಾಟೀದಾರ್ ಸಮುದಾಯಕ್ಕೆ ಮೀಸಲಾತಿಗೆ ಒತ್ತಾಯಿಸಿ ನಡೆಸುತ್ತಿರುವ ಧರಣಿಯಿಂದ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಅದಕ್ಕಾಗಿ ನಾನು ನಿಮ್ಮಲ್ಲಿ ಪತ್ರದ ಮೂಲಕ ಮನವಿ ಮಾಡುತ್ತಿದ್ದೇನೆ. ಈ ಸಮಸ್ಯೆಯನ್ನು ಬೇಗನೆ ಪರಿಹರಿಸಿ. ಹಿಂದುಳಿದ ವರ್ಗದವರಿಗಾಗಿ ಹೋರಾಡುತ್ತಿರುವ ಯುವ ನಾಯಕನನ್ನು ಉಳಿಸಿ ಎಂದು ಹೆಚ್.ಡಿ.ಡಿ ಮನವಿ ಮಾಡಿದ್ದಾರೆ.

ಅಮರಣಾಂತ ಉಪವಾಸ ನಡೆಸುತ್ತಿರುವ ಹಾರ್ದಿಕ್ ಪಟೇಲ್ ಗೂ ಪತ್ರ ಬರೆದಿರುವ ದೇವೇಗೌಡರು, ಹಿಂದುಳಿದ ವರ್ಗದ ಕಲ್ಯಾಣಕ್ಕಾಗಿ ನಡೆಸುತ್ತಿರುವ ಹೋರಾಟ ನಿಜಕ್ಕೂ ಮೆಚ್ವುವಂತದ್ದು, ಆದರೆ ನಿಮ್ಮ ಆರೋಗ್ಯ ಕ್ಷೀಣಿಸುತ್ತಿದೆ. ಉಪವಾಸ ಸತ್ಯಾಗ್ರಹ ಇಲ್ಲಿಗೆ ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ.

Comments