ಸ್ಪೋಟಕ ಸುದ್ದಿ: ಮೈತ್ರಿ ಸರ್ಕಾರದ ಪತನದ ಭೀತಿ..!!! ಉಸ್ತುವಾರಿಗಳು ಬೆಂಗಳೂರಿಗೆ ದೌಡು..!!!!
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಭೀತಿ ಹಿನ್ನಲೆಯಲ್ಲಿ ಬರುತ್ತಿದ್ದಾರೆ ಎನ್ನಲಾಗಿದೆ.ರಾಜ್ಯ ಕಾಂಗ್ರೆಸ್ನಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಗೊಳಿಸುವ ಕುರಿತು ಮತ್ತು ಸಂಪುಟ ವಿಸ್ತರಣೆ ಬಗ್ಗೆ ವೇಣುಗೋಪಾಲ್ ಕೈ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಕೆ.ಸಿ. ವೇಣುಗೋಪಾಲ್ ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸೂಚನೆ ಮೇರೆಗೆ ವೇಣುಗೋಪಾಲ್ ರಾಜ್ಯಕ್ಕೆ ಬರುತ್ತಿದ್ದಾರೆ ಎನ್ನಲಾಗಿದೆ. ಶನಿವಾರ ತಡರಾತ್ರಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಭಾನುವಾರ ಯೂರೋಪ್ ಪ್ರವಾಸ ಮುಗಿಸಿ ವಾಪಸಾಗಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.


Comments
Post a Comment