ಶಾಕಿಂಗ್ ನ್ಯೂಸ್: ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರುವುದು ನಿಶ್ಚಿತ ಎಂದ ಆ ಪ್ರಭಾವಿ ರಾಜಕಾರಣಿ ಯಾರು!!!!


ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಉರುಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ನಡೆಸಿಲ್ಲ. ಆದರೆ, ಕಾಂಗ್ರೆಸ್ಸಿನ ಕೆಲ ಪ್ರಮುಖ ನಾಯಕರು ಬಿಜೆಪಿ ಸೇರುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.


ರವಿವಾರ ಇಲ್ಲಿನ ಡಾಲರ್ಸ್‌ ಕಾಲನಿಯಲ್ಲಿನ ತನ್ನ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮೈತ್ರಿ ಸರಕಾರ ಸರಕಾರವನ್ನು ಉರುಳಿಸುವ ಪ್ರಯತ್ನಕ್ಕೆ ಬಿಜೆಪಿ ಯಾವುದೇ ಕಾರಣಕ್ಕೂ ಕೈ ಹಾಕುವುದಿಲ್ಲ. ಆದರೆ, ಕಾಂಗ್ರೆಸ್-ಜೆಡಿಎಸ್ ಮುಖಂಡರಿಗೆ ಏಕೆ ಆತಂಕವೋ ತಿಳಿಯದು ಎಂದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಮುಂಬರುವ ಲೋಕಸಭಾ ಚುನಾವಣೆಗೆ ನಾಯಕರುಗಳ ಪ್ರವಾಸ ಸಿದ್ಧತೆ ನಡೆದಿದೆ. ತಾನು ಸದ್ಯದಲ್ಲೇ ರಾಜ್ಯಾದ್ಯಂತ ಪ್ರವಾಸ ನಡೆಸುವೆ ಎಂದ ಅವರು, ಲೋಕಸಭಾ ಚುನಾವಣೆಗೆ ಅಣಿಯಾಗಬೇಕಾಗಿರುವುದರಿಂದ ಮತ್ತೆ ದಿಲ್ಲಿಗೆ ಹೋಗುತ್ತಿಲ್ಲ ಎಂದರು.

Comments